10Th ಪಾಸಾದವರಿಗೆ 44 ಸಾವಿರ ಸಂಬಳದ ಕೆಲಸ; ISRO ದಲ್ಲಿದೆ ಭರ್ಜರಿ ಉದ್ಯೋಗಾವಕಾಶ

Hruthin 01 2025 08 20t202302.226 2025 08 0dc05a9f271ccdbf9e9079b045aaf85c 3x2.jpg


ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) 2025ರ ಉದ್ಯೋಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ isro.gov.in ಮೂಲಕ ಬಿಡುಗಡೆ ಮಾಡಿದೆ. ಉದ್ಯೋಗಾಕಾಂಕ್ಷಿಗಳು ಇತ್ತೀಚಿನ ISRO ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ವಿವರಗಳನ್ನು ಪರಿಶೀಲಿಸಿ ಮತ್ತು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ISRO ಖಾಲಿ ಹುದ್ದೆಗಳ ವಿವರಗಳಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವ ವಿಧಾನ, ಆನ್‌ಲೈನ್ ಅರ್ಜಿ ಲಿಂಕ್, ವಯಸ್ಸಿನ ಸಡಿಲಿಕೆ, ಉದ್ಯೋಗ ವಿವರಣೆ, ನೇಮಕಾತಿ ಪ್ರಕ್ರಿಯೆ, ಒಪ್ಪಂದದ ಅವಧಿ, ಸಾಮಾನ್ಯ ಷರತ್ತುಗಳು ಮತ್ತು ಇತರ ವಿವರಗಳ ಕುರಿತು ಮಾಹಿತಿ ಇಲ್ಲಿದೆ:

ಖಾಲಿ ಹುದ್ದೆಯ ವಿವರ:

ಬಿಡುಗಡೆಯಾದ ಅಧಿಸೂಚನೆಯ ಪ್ರಕಾರ, ತಾಂತ್ರಿಕ ಸಹಾಯಕ ಹುದ್ದೆಗಳು 12, ಉಪ ಅಧಿಕಾರಿ ಹುದ್ದೆಗಳು 1, ತಂತ್ರಜ್ಞ-ಬಿ ಹುದ್ದೆಗಳು 6, ಹೆವಿ ವೆಹಿಕಲ್ ಡ್ರೈವರ್-ಎ ಹುದ್ದೆಗಳು 2 ಮತ್ತು ಲಘು ವಾಹನ ಚಾಲಕ-ಎ ಹುದ್ದೆಗಳು ಖಾಲಿ ಇವೆ.

ವಯೋಮಿತಿ:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ( ISRO LPSC ) ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸು ಮೀರಬಾರದು. (ವಯೋಮಿತಿ ಸಡಿಲಿಕೆ: SC/ST ಅಭ್ಯರ್ಥಿಗಳು: 05 ವರ್ಷಗಳು, ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು)

ಸಂಬಳ: 7 ಪೇ ಮ್ಯಾಟ್ರಿಕ್ಸ್ ಅನುಗುಣವಾಗಿ 44,900 ರಿಂದ 1,42,400

ಅರ್ಜಿ ಶುಲ್ಕ:

  • ಮಹಿಳಾ/ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/ಮಾಜಿ ಸೈನಿಕರ ಅಭ್ಯರ್ಥಿಗಳು: ಇಲ್ಲ
  • ಇತರ ಎಲ್ಲಾ ಅಭ್ಯರ್ಥಿಗಳು: ರೂ.750/-
ಶೈಕ್ಷಣಿಕ ಅರ್ಹತೆ:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ( ISRO LPSC ) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ 10 ನೇ, ಐಟಿಐ,ಡಿಪ್ಲೊಮಾ, ಬಿ ಎಸ್ಸಿ ಪೂರ್ಣ ಗೊಳಿಸಿರಬೇಕು.

ಸಾಮಾನ್ಯ ಷರತ್ತುಗಳು:

ಅಭ್ಯರ್ಥಿಗಳು ಭಾರತೀಯ ನಾಗರಿಕರಾಗಿರಬೇಕು ಮತ್ತು ISROನ ಮಾನದಂಡಗಳಿಗೆ ಅನುಗುಣವಾಗಿರಬೇಕು. ತಪ್ಪು ಮಾಹಿತಿ ನೀಡಿದರೆ ಅರ್ಜಿಯನ್ನು ತಿರಸ್ಕರಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ISROನ ನಿಯಮಾವಳಿಗಳನ್ನು ಪಾಲಿಸಬೇಕು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12-08-2025

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-08-2025

ಅರ್ಜಿ ಸಲ್ಲಿಸುವುದು ಹೇಗೆ?

1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.

2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.

3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.

4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.

5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)

6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.

7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.

8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ

ಅಧಿಸೂಚನೆ:



Source link

Leave a Reply

Your email address will not be published. Required fields are marked *

TOP