Last Updated:
ಜನವರಿ 25, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.
NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಲ್ಯಾಬೋರೇಟರಿ ಟೆಕ್ನಿಷಿಯನ್(Laboratory Technician) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 25, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನಿಮ್ಹಾನ್ಸ್ |
ಹುದ್ದೆ | ಲ್ಯಾಬೋರೇಟರಿ ಟೆಕ್ನಿಷಿಯನ್ |
ಒಟ್ಟು ಹುದ್ದೆ | 1 |
ವೇತನ | ಮಾಸಿಕ ₹ 25,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 25, 2023 |
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಎಂಎಲ್ಟಿ, ಡಿಪ್ಲೋಮಾ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಮಾಸಿಕ ₹ 25,000
ಬೆಂಗಳೂರು
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 25, 2023
Bangalore,Bangalore,Karnataka
January 15, 2023 2:26 PM IST