ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾಥಮಿಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡುವ ಅವಕಾಶ ದೊರೆಯುತ್ತದೆ. ಅರ್ಥಾತ್ ಬೆಳ್ತಂಗಡಿ, ಬಂಟ್ವಾಳ , ಮಂಗಳೂರು (ಗ್ರಾಮೀಣ), ಮಂಗಳೂರು (ನಗರ), ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇರಲಿದೆ.
ಅಂಗನವಾಡಿ ಶಿಕ್ಷಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಪಿಯುಸಿ (PUC) ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ಯ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ
ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿಗಳನ್ನು ಆನ್ಲೈನ್ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ಆನ್ಲೈನ್ ಅರ್ಜಿ ಲಿಂಕ್ನಲ್ಲಿ ಅರ್ಜಿಯನ್ನು ತೆರೆದು, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ. ಭರ್ತಿ ಮಾಡಿದ ಮಾಹಿತಿಯನ್ನು ಒಮ್ಮೆ ಪರಿಶೀಲಿಸಿ, ಅಗತ್ಯವಿದ್ದರೆ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ. ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:
- ಜನನ ಪ್ರಮಾಣ ಪತ್ರ ಅಥವಾ ಎಸ್ಎಸ್ಎಲ್ಸಿ ಅಂಕಪಟ್ಟಿ
- ಶೈಕ್ಷಣಿಕ ಅರ್ಹತೆಯ ಅಂಕಪಟ್ಟಿ
- ಕಳೆದ 3 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿಧವೆ/ವಿಚ್ಛೇದನ/ಅಂಗವಿಕಲತೆ ಪ್ರಮಾಣ ಪತ್ರ (ಅಗತ್ಯವಿದ್ದರೆ)
ಸಂಪರ್ಕಿಸಲು ಇರುವ ಕಚೇರಿಗಳು: ಹೆಚ್ಚಿನ ಮಾಹಿತಿಗಾಗಿ ವಿವಿಧ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಸಂಪರ್ಕಿಸಬಹುದು:
- ಬೆಳ್ತಂಗಡಿ – 08256-295134
- ಬಂಟ್ವಾಳ – 08255-298562
- ಮಂಗಳೂರು (ಗ್ರಾಮೀಣ) – 0824-2263199
- ಮಂಗಳೂರು (ನಗರ) – 0824-2959809
- ಪುತ್ತೂರು – 08251-298788
- ಇತರೆ ಮಾಹಿತಿಗೆ – 7795581349, 08255-238080
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮಕ್ಕಳ ಶಿಕ್ಷಣ, ಪೋಷಣಾ ಹಾಗೂ ಆರೋಗ್ಯದ ಸೇವೆಯನ್ನು ಸುಧಾರಿಸಲು ಪ್ರಮುಖ ಪಾತ್ರವಹಿಸುತ್ತವೆ. ಈ ಹುದ್ದೆಗಳು ಗೌರವ ಸೇವೆಯ ಹುದ್ದೆಗಳಾಗಿದ್ದು, ಸಮುದಾಯದ ಮಕ್ಕಳ ಬೆಳವಣಿಗೆಯಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಒದಗಿಸುತ್ತವೆ.
- ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 2 ಸೆಪ್ಟೆಂಬರ್ 2025 ಆಗಿದ್ದು, ಕೊನೆಯ ದಿನಾಂಕ 10 ಅಕ್ಟೋಬರ್ 2025 ಎಂದು ನಿಗದಿಪಡಿಸಲಾಗಿದೆ. ಆದ್ದರಿಂದ ಅರ್ಹ ಅಭ್ಯರ್ಥಿಗಳು ತಕ್ಷಣವೇ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.
- ಅರ್ಜಿ ಸಲ್ಲಿಸುವ ಲಿಂಕ್: https://karnemakaone.kar.nic.in/abcd/ApplicationForm_JA_org.aspx
ಹಾಗಾಗಿ, ಈ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಕ್ಕಳ ಶಿಕ್ಷಣ ಮತ್ತು ಪೌಷ್ಠಿಕಾಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಹುದ್ದೆಗಳಾಗಿವೆ. ಈ ಹುದ್ದೆಗಳಲ್ಲಿ ಕೆಲಸ ಮಾಡುವುದರಿಂದ ಸಮಾಜ ಸೇವೆಯ ಜೊತೆಗೆ ಮಹಿಳೆಯರಿಗೆ ಉದ್ಯೋಗಾವಕಾಶವೂ ಲಭ್ಯವಾಗುತ್ತದೆ.
Dakshina Kannada,Karnataka
September 11, 2025 8:10 PM IST