Last Updated:
ಫೆಬ್ರವರಿ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್ಲೈನ್(Offline)ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.
NMPT Recruitment 2023: ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ನವ ಮಂಗಳೂರು ಬಂದರು ಟ್ರಸ್ಟ್(New Mangalore Port Trust )ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸಿಸ್ಟೆಂಟ್ ಸೆಕ್ರೆಟರಿ(Assistant Secretary) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ (Mangalore) ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಫೆಬ್ರವರಿ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್ಲೈನ್(Offline)ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನವ ಮಂಗಳೂರು ಬಂದರು ಟ್ರಸ್ಟ್ |
ಹುದ್ದೆ | ಅಸಿಸ್ಟೆಂಟ್ ಸೆಕ್ರೆಟರಿ |
ಒಟ್ಟು ಹುದ್ದೆ | 2 |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 40,000-1,40,000 |
ಉದ್ಯೋಗದ ಸ್ಥಳ | ಮಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 13, 2023 |
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು.
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಮಾಸಿಕ ₹ 40,000-1,40,000
ಮಂಗಳೂರು
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸೆಕ್ರೆಟರಿ I/c
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು-575010
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/01/2023
ಅರ್ಜಿ ಸಲ್ಲಿಸಲು ಕೊನೆ ದಿನ: ಫೆಬ್ರವರಿ 13, 2023
January 24, 2023 11:17 AM IST