Last Updated:
ಜುಲೈ 1, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ.
KRCL Recruitment 2024: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್(Konkan Railway Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸ್ಟೇಷನ್ ಮಾಸ್ಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ರೈಲ್ವೆ ಇಲಾಖೆಯಲ್ಲಿ (Railway Department) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಜುಲೈ 1, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ |
---|---|
ಹುದ್ದೆ | ಸ್ಟೇಷನ್ ಮಾಸ್ಟರ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ದಕ್ಷಿಣ ಕನ್ನಡ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜುಲೈ 1, 2024 |
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 21, 2024ಕ್ಕೆ ಗರಿಷ್ಠ 61 ವರ್ಷ ಮೀರಿರಬಾರದು.
ರಾಯ್ಗಡ
ದಕ್ಷಿಣ ಕನ್ನಡ
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ krclredepu@krcl.co.in ಗೆ ಕಳುಹಿಸಬೇಕು.
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 21/06/2024
ಇ-ಮೇಲ್ ಕಳುಹಿಸಲು ಕೊನೆಯ ದಿನ: ಜುಲೈ 1, 2024
Dakshina Kannada,Karnataka
June 25, 2024 4:47 PM IST