ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 1, 2024ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 1,20,000-2,80,000 ಸಂಬಳ ಕೊಡಲಾಗುತ್ತದೆ.
ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡಿಸ್ಪ್ಯಾಚ್ ವಿಭಾಗ
ನೆಲ ಮಹಡಿ
ಆಗಸ್ಟ್ ಕ್ರಾಂತಿ ಭವನ
ಭಿಕಾಜಿ ಕಾಮಾ ಪ್ಲೇಸ್
ಆರ್.ಕೆ. ಪುರಂ
ನವದೆಹಲಿ-110066
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/06/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 12, 2024(ನಾಳೆ)
July 11, 2024 11:27 AM IST